ಕಚೇರಿ ಉದ್ಘಾಟನೆ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಗೆ ಒಳಪಡುವ ಕಣೇಗೌಡನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಗ್ರಾಮ ಪಂಚಾಯತಿ ಕಟ್ಟಡವನ್ನು ಇಂದು ಉದ್ಘಾಟಿಸಲಾಯಿತು.
ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎನ್. ಶ್ರೀನಿವಾಸ್ ಅವರು ಕಟ್ಟಡವನ್ನು ಉದ್ಘಾಟಿಸಿ, ಗ್ರಾಮ ಪಂಚಾಯತಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ಗ್ರಾಮ ಪಂಚಾಯತಿ ಕಟ್ಟಡಗಳ ಪೈಕಿ ಕಣೇಗೌಡನಹಳ್ಳಿಯ ಈ ಕಟ್ಟಡವು ಅತ್ಯಂತ ಉತ್ತಮ ಗುಣಮಟ್ಟದಿಂದ ಕೂಡಿದೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ನೆಲಮಂಗಲದಲ್ಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳು ಸಹ ಇದೇ ಮಾದರಿಯಲ್ಲಿ ನೂತನ ಕಟ್ಟಡಗಳನ್ನು ನಿರ್ಮಾಣ ಮಾಡುವಂತಾಗಲಿ. ಇದಕ್ಕೆ ಶಾಸಕನಾಗಿ ನನ್ನ ಪ್ರಯತ್ನ ನಿರಂತರವಾಗಿರುತ್ತದೆ ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಸಹಕರಿಸುತ್ತೇನೆ ಎಂದು ಅವರು ಭರವಸೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಸವನಹಳ್ಳಿಯ ಶ್ರೀ ರಮಣಾನಂದ ನಾಥ ಸ್ವಾಮೀಜಿ ವಹಿಸಿದ್ದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀ ಎನ್. ಗಣೇಶ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾII ಬಿಂದು, ದಂಡಾಧಿಕಾರಿ ಶ್ರೀ ಮಲ್ಲೇಶ್ ವೀರಪ್ಪ ಪೂಜಾರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ನಾರಾಯಣ ಸ್ವಾಮಿ, ಎನ್‌ಡಿಎ (ನೆಲಮಂಗಲ ಯೋಜನಾ ಪ್ರಾಧಿಕಾರ) ಅಧ್ಯಕ್ಷರಾದ ಶ್ರೀ ಎಂ.ಕೆ. ನಾಗರಾಜ್, ಕಸಬಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಂಜುನಾಥ್ ಗೌಡ ಸೇರಿದಂತೆ ಗ್ರಾಮದ ಹಲವು ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ನೂತನ ಕಟ್ಟಡದ ಉದ್ಘಾಟನೆಯಿಂದಾಗಿ ಗ್ರಾಮ ಪಂಚಾಯತಿಯ ಆಡಳಿತ ಸುಗಮವಾಗಲಿದ್ದು, ಗ್ರಾಮಸ್ಥರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಸಹಾಯಕವಾಗಲಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದರು.ಕಚೇರಿ ಉದ್ಘಾಟನೆ

Leave a Reply

Your email address will not be published. Required fields are marked *